ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಯಡಿಯೂರಪ್ಪನವರ ಪರಮಾಧಿಕಾರವಾಗಿದೆ. ಕೇಂದ್ರ ನಾಯಕರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ಮಾತನಾಡಿದ ಅವರು, ನಮ್ಮ ಜೊತೆ ಬಂದವರಿಗೆ ಯಡಿಯೂರಪ್ಪ ಅನ್ಯಾಯ ಮಾಡಿಲ್ಲ. ಸೋತವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಾರೆ. ಹೊಸದಾಗಿ ಏನು ಕೊಡಬೇಕೆಂದು ಅವರು ನಿರ್ಧರಿಸುತ್ತಾರೆ. ಯಡಿಯೂರಪ್ಪ ಕೊಟ್ಟ ಮಾತನ್ನು ನಡೆಸಿಕೊಡುತ್ತಾರೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ನಮ್ಮ ನಾಯಕರು. ಅವರ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ತಿಳಿಸಿದರಲ್ಲದೇ, ಮೈಸೂರು ಜಿಲ್ಲಾ ಧಿಕಾರಿ, ಶಾಸಕರ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲವನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.