
ತುಮಕೂರು: ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿದ್ದು, ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿ ಕುರಿತಾಗಿ ಶೀಘ್ರವೇ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಕಾರ ಕ್ಷೇತ್ರದ ಸಮಸ್ಯೆಗಳನ್ನು ಸರಿಪಡಿಸಲು ಅಗತ್ಯವಾದರೆ ನಿಯಮಗಳಿಗೆ ತಿದ್ದುಪಡಿ ತರುವುದಾಗಿ ಅವರು ಹೇಳಿದ್ದಾರೆ.