alex Certify BIG NEWS: ಯಶಸ್ವಿನಿ ಯೋಜನೆ ಮತ್ತೆ ಜಾರಿ ಬಗ್ಗೆ ಸಚಿವ ಸೋಮಶೇಖರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಶಸ್ವಿನಿ ಯೋಜನೆ ಮತ್ತೆ ಜಾರಿ ಬಗ್ಗೆ ಸಚಿವ ಸೋಮಶೇಖರ್ ಮಾಹಿತಿ

ತುಮಕೂರು: ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿದ್ದು, ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿ ಕುರಿತಾಗಿ ಶೀಘ್ರವೇ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಕಾರ ಕ್ಷೇತ್ರದ ಸಮಸ್ಯೆಗಳನ್ನು ಸರಿಪಡಿಸಲು ಅಗತ್ಯವಾದರೆ ನಿಯಮಗಳಿಗೆ ತಿದ್ದುಪಡಿ ತರುವುದಾಗಿ ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...