
ಮೈಸೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ಬಿಜೆಪಿಯವರೇ ಮುಂದಾಗುತ್ತಿದ್ದಾರೆ. ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ ಎಂದು ಕಿಡಿಕಾರಿದರು.
ನಾನು ಕಾಂಗ್ರೆಸ್ ನಲ್ಲಿದ್ದವನು. ಅವರಾಗಿಯೇ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಸೋಮಶೇಖರ್ ಹೋದರೆ ಹೋಗಲಿ ಎಂದು ಮತನಾಡುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಸಿಎಂ, ಡಿಸಿಎಂ ಭೇಟಿಯಾಗುತ್ತೇನೆ ತಪ್ಪೇನು? ಎಂದು ಕೇಳಿದರು.