ಮೈಸೂರು: ಕೆಆರ್ ನಗರ ಶಾಸಕ ಸಾ.ರಾ. ಮಹೇಶ್ ಕೊರೊನಾ ಸೋಂಕಿತರಿಗೆ ಅನುಕೂಲವಾಗುವಂತೆ ಸ್ವಂತ ಖರ್ಚಿನಲ್ಲಿ 200 ಬೆಡ್ ಗಳ ಆಸ್ಪತ್ರೆಯನ್ನು ಸಜ್ಜುಗೊಳಿಸಿದ್ದಾರೆ. ಮೂವರು ವೈದ್ಯರನ್ನು ನೇಮಕ ಮಾಡಿದ್ದು, ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ಸೇವೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಕೂಡ ಸಾ.ರಾ. ಮಹೇಶ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಕೆಆರ್ ನಗರ ಶಾಸಕ ಸಾ.ರಾ. ಮಹೇಶ್ ಕೋವಿಡ್ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಪ್ರಶಂಸಿಸಿದ್ದಾರೆ.
ರಾಜಕೀಯವಾಗಿ ಇಬ್ಬರೂ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿದ್ದರು. ಸಾ.ರಾ. ಮಹೇಶ್ ಕಾರ್ಯವನ್ನು ವಿಶ್ವನಾಥ್ ಹೊಗಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಅವರು ವೈದ್ಯಕೀಯ ನೆರವು ಕಲ್ಪಿಸಿದ್ದಾರೆ. ರಾಜಕೀಯವಾಗಿ ಭಿನ್ನಾಭಿಪ್ರಾಯವಿದ್ದರೂ, ಯಾವುದೇ ಪಕ್ಷದಲ್ಲಿದ್ದರೂ ಉತ್ತಮ ಕೆಲಸಗಳನ್ನು ಪ್ರಶಂಸಿಸಬೇಕು ಎಂದು ವಿಶ್ವನಾಥ್ ಹೇಳಿದ್ದಾರೆ.