ಬೆಂಗಳೂರು : ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಇಂದು ಸಂಜೆ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಬೆಂಗಳೂರಿನ ಆಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಸದ್ಯ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.