
ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಅವರಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಲು ಮರದ ತಿಮ್ಮಕ್ಕ ಅವರು ಕಳೆದ ಕೆಲ ತಿಂಗಳ ಹಿಂದೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಅವರು ದತ್ತು ಪುತ್ರ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಸೆಪ್ಟೆಂಬರ್ 26 ರಂದು ತಿಮ್ಮಕ್ಕನವರಿಗೆ ಉಸಿರಾಟದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.