
ಮಲಪ್ಪುರಂ: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಮಲಪುರಂ ಜಿಲ್ಲೆಯ ಮಂಜೇರಿಯಲ್ಲಿ ಶುಕ್ರವಾರ ಸಂಜೆ ಅಪಘಾತ ಸಂಭವಿಸಿದೆ. ಮಂಜೇರಿ –ಆರಿಕೋಡು ರಸ್ತೆಯ ಚೆಟ್ಟಿಯಂಗಡಿ ಬಳಿ ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕ ಮಜೀದ್ ಹಾಗೂ ಆಟೋದಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಒಬ್ಬರನ್ನು ಮಂಜೇರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲಪ್ಪುರಂ ಎಸ್.ಪಿ. ಶಶಿಧರನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.