alex Certify ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್

ಬೆಂಗಳೂರು: ಕೇರಳಧ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಘೇ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ನೇರವಾಘೀ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸೇವೆ ಆರಂಭಿಸಲಾಗುವುದು.

ಡಿ. 1 ರಿಂದ ಪ್ರತಿದಿನ ಬೆಂಗಳೂರು –ನಿಲಕಲ್(ಪಂಪಾ) ನಡುವೆ ಕೆಎಸ್ಆರ್ಟಿಸಿ ವೋಲ್ವೋ ಬಸ್ ಸಂಚಾರ ಇರಲಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 1.50ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 6:45ಕ್ಕೆ ಪಂಪಾ ತಲುಪಲಿದೆ.

ಮತ್ತೊಂದು ಬಸ್ ನಿತ್ಯ ಸಂಜೆ 6 ಗಂಟೆಗೆ ಪಂಪಾದಿಂದ ಹೊರಟು ಮರುದಿನ 10 ಗಂಟೆಗೆ ಬೆಂಗಳೂರು ತಲುಪಲಿದೆ. 1600 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಕೆಎಸ್ಆರ್ಟಿಸಿ ವೆಬ್ಸೈಟ್ ಮೂಲಕ ಅಥವಾ ಪ್ರಮುಖ ಬಸ್ ಡಿಪೋ ಗಳಲ್ಲಿ ಟಿಕೆಟ್ ಕೌಂಟರ್ ಗಳಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...