ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ ಋತುವಿನಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಕೊಚುವೇಲಿ -ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್(ಎಸ್ಎಂವಿಟಿ) ಬೆಂಗಳೂರು ನಿಲ್ದಾಣಗಳ ನಡುವೆ ದಕ್ಷಿಣ ರೈಲ್ವೆ ವಿಶೇಷ ರೈಲುಗಳ ಸೇವೆಯನ್ನು ಕಲ್ಪಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.
ರೈಲು ಸಂಖ್ಯೆ 06083 ಕೊಚುವೇಲಿ- ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ವಿಷೇಶ ರೈಲು ಕೊಚುವೇಲಿ ನಿಲ್ದಾಣದಿಂದ ನವೆಂಬರ್ 12 ರಿಂದ ಜನವರಿ 28ರ ವರೆಗೆ ಪ್ರತಿ ಮಂಗಳವಾರ ಸಂಜೆ 6.05 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55 ಕ್ಕೆ ಎಸ್ಎಂಐಟಿ ಬೆಂಗಳೂರು ತಲುಪಲಿದೆ.
ರೈಲು ಸಂಖ್ಯೆ 06084 ಎಸ್ಎಂವಿಟಿ ಬೆಂಗಳೂರು –ಕೊಚುವೇಲಿ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ನವೆಂಬರ್ 13ರಿಂದ 2025 ರ ಜನವರಿ 29 ರವರೆಗೆ ಪ್ರತಿ ಬುಧವಾರ ಮಧ್ಯಾಹ್ನ 12:45 ಕ್ಕೆ ಹೊರಟು ಮರುದಿನ ಬೆಳಗ್ಗೆ 6:45 ಕ್ಕೆ ಕೊಚುವೇಲಿ ತಲುಪಲಿದೆ.
ಎರಡು ದಿಕ್ಕಿನ ಮಾರ್ಗದಲ್ಲಿ ಈ ರೈಲುಗಳು ಕೊಲ್ಲಂ, ಕಾಯಕುಳಂ, ಚೆಂಗನೂರು, ಪಾಲಕ್ಕಾಡ್, ಪದನೂರು, ಈರೋಡ್, ಸೇಲಂ, ಜೋಲಾರ್ ಪೇಟ್ ಜಂಕ್ಷನ್ ಗಳಲ್ಲಿ ನಿಲುಗಡೆಯಾಗಲಿದೆ. ಶಬರಿಮಲೆಗೆ ತೆರಳುವ ಭಕ್ತರು ಚೆಂಗನೂರು ಬಳಿ ಇಳಿದು ಅಲ್ಲಿಂದ ಪಂಪಾಗೆ ಬಸ್ ಮೂಲಕ ಪ್ರಯಾಣಿಸಬಹುದಾಗಿದೆ.
www.enquiry.indianrail.gov.in ಅಧಿಕೃತ ರೈಲ್ವೆ ವೆಬ್ಸೈಟ್ ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಸಮಯ ಪರಿಶೀಲಿಸಬಹುದಾಗಿದೆ.