ಜೈಪುರ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ತಾರಕಕ್ಕೇರಿದೆ. ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪನೆಗೆ ಸಚಿನ್ ಪೈಲಟ್ ನಿರ್ಧಾರ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡ್ಡೆದಿರುವ ಸಚಿನ್ ಪೈಲಟ್ ಜೂನ್ 11ರಂದು ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ. ತಮ್ಮ ಪಕ್ಷದ ಸರ್ಕಾರ ಮತ್ತು ಮುಖ್ಯಮಂತ್ರಿ ಗೆಹ್ಲೋಟ್ ವಿರುದ್ಧ ನಿರಂತರವಾಗಿ ಹರಿಹಾಯುತ್ತಿದ್ದ ಸಚಿನ್ ಪೈಲಟ್ ಜೂನ್ 11ರಂದು ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಚಿನ್ ಪೈಲಟ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಅವಕಾಶ ವಂಚಿತರಾಗಿದ್ದರು. ಜೂನ್ 11ರಂದು ದಿ. ರಾಜೇಶ್ ಪೈಲಟ್ ಅವರ ಜನ್ಮ ದಿನಾಚರಣೆ. ತಮ್ಮ ತಂದೆಯ ಜನ್ಮದಿನದಂದು ಸಚಿನ್ ಪೈಲಟ್ ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ.