alex Certify ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ನಕಲಿ ಅಶ್ಲೀಲ ವಿಡಿಯೋ ಹರಿಬಿಟ್ಟು ತೇಜೋವಧೆಗೆ ಯತ್ನ: ಕಿಡಿಗೇಡಿಗಳ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ನಕಲಿ ಅಶ್ಲೀಲ ವಿಡಿಯೋ ಹರಿಬಿಟ್ಟು ತೇಜೋವಧೆಗೆ ಯತ್ನ: ಕಿಡಿಗೇಡಿಗಳ ವಿರುದ್ಧ ದೂರು

ಬೆಂಗಳೂರು: ಮಾಜಿ ಸಿಎಂ ಡಿವಿ ಸದಾನಂದ ಗೌಡರ ತೇಜೋವಧೆ ಮಾಡಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈಗಾಗಲೇ ಸದಾನಂದಗೌಡ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಮನವಿ ಮಾಡಿದ್ದಾರೆ.

ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳು ಮಾಡಲು ಇದನ್ನು ನಿರ್ಮಿಸಿದ್ದಾರೆ. ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ ಕೋರ್ಟ್ ತಡೆಯಾಜ್ಞೆಯ ಪ್ರಕಾರ ಈ ವಿಷಯವನ್ನು ಫಾರ್ವರ್ಡ್ ಮಾಡುವುದು ಅಪ್ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ ನನಗೆ ಇನ್ಬಾಕ್ಸ್ ಮಾಡಿ ಎಂದು ಸದಾನಂದಗೌಡ ಮನವಿ ಮಾಡಿದ್ದಾರೆ.

ನನ್ನ ರಾಜಕೀಯ ಜೀವನ ಮತ್ತು ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...