ಬೆಂಗಳೂರು: ಮಹಿಳೆಯರ ಸುರಕ್ಷತೆ ಉದ್ದೇಶದಿಂದ ಆರಂಭಿಸಿರುವ ಸೇಫ್ ಸಿಟಿ ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರಗಳಿಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ನಿರ್ಭಯಾ ನಿಧಿ ಯೋಜನೆ ಅಡಿ ಬೆಂಗಳೂರಿನಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. 7,000 ಸಿಸಿ ಕ್ಯಾಮೆರಾಗಳ ಅಳವಡಿಕೆ, ನಿಗಾವಹಿಸುವುದು, ಕೇಂದ್ರೀಯ ನಿಯಂತ್ರಣ ವ್ಯವಸ್ಥೆ ಮೊದಲಾದ ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಉದ್ದೇಶಿತ ಸೇಫ್ ಸಿಟಿ ಯೋಜನೆಯನ್ನು ಎಲ್ಲಾ ಮಹಾನಗರಗಳಿಗೂ ವಿಸ್ತರಿಸಲಾಗುವುದು ಎಂದರು.
ಮಹಿಳೆಯರು ಕುಟುಂಬ ನಿರ್ವಹಣೆಗೆ ಸೀಮಿತವಲ್ಲ, ಅವರು ಆರ್ಥಿಕ ಶಕ್ತಿಗಳಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮೆರೆದು ಅವಕಾಶ ಸದ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.