alex Certify ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ಘೋರ ದುರಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಳಗುಪ್ಪ ಸಮೀಪದ ಬಳೆಗಾರು ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು. ಜೋಗ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಾಗರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ನಂತರ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...