alex Certify ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸೊರಬ ಮೂಲದ ರಫೀಕ್(38) ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಜಮೀನು ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದೆ. ಗುರುವಾರ ಸಂಜೆ ರಫೀಕ್ ನನ್ನು ಆತನ ಕಾರ್ ನಲ್ಲಿ ಸೊರಬದಿಂದ ಸಾಗರ ಹೊರವಲಯದ ಐಗಿನಬೈಲು ಬಳಿ ಕರೆದುಕೊಂಡು ಬರಲಾಗಿದ್ದು, ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರ್ ಹತ್ತಿಸಿ ಹತ್ಯೆ ಮಾಡಲಾಗಿದೆ.

ಈ ವೇಳೆ ಕಾರ್ ನಲ್ಲಿ ಮಹಿಳೆ ಸೇರಿದಂತೆ ನಾಲ್ವರು ಇದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಆನಂದಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...