alex Certify ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ದಿನಾಂಕ ಘೋಷಿಸಲಾಗಿತ್ತು.

ಆದರೆ, ಪೂರ್ವ ತಯಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಡಿಸೆಂಬರ್ 23 ರಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನ ದಿನಾಂಕವನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 23, 24, 25 ರಂದು ಹಿರಿಯ ಕವಿ ದೊಡ್ಡರಂಗೇಗೌಡರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...