alex Certify ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ.

ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದರು.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.  ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...