ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ನಟ ಸೈಫ್ ಅಲಿಖಾನ್ ಗೆ ಇತ್ತೀಚೆಗೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಾಕು ಇರಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಪ್ರಕರಣ ಸಂಬಂಧ ಈಗಾಗಲೇ ಬಾಂಗ್ಲಾ ವಲಸಿಗ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಈ ನಡುವೆ ಇದೀಗ ಮಹಿಳೆಯೋರ್ವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ನಡಿಯಾದಲ್ಲಿ ಮಹಿಳೆಯೋರ್ವರನ್ನು ಬಂಧಿಸಿದ್ದು, ಮುಂಬೈಗೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ.