BIG NEWS: ಕರ್ತವ್ಯ ಲೋಪ, ಕಾರ್ಯ ನಿರ್ವಹಣೆಯಲ್ಲಿ ವಿಫಲತೆ ಆರೋಪ: ಅರಣ್ಯಾಧಿಕಾರಿ ಶಿಲ್ಪಾ ಅಮಾನತು

ಹಾಸನ: ಕರ್ತವ್ಯಲೋಪ ಸೇರಿದಂತೆ ಹಲವು ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ವಲಯದ ಅರಣ್ಯಾಧಿಕಾರಿ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲತೆ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲತೆ, ಭೌತಿಕ ಹಾಗೂ ಆರ್ಥಿಕ ಪ್ರಗತಿ ಕಾರ್ಯನಿರ್ವಹಣೆಯಲ್ಲಿಯೂ ವಿಫಲತೆ ಸೇರಿದಂತೆ ಹಲವು ಕಾರಣಗಳಿಂದ ವಲಯ ಅರಣ್ಯಾಧಿಕಾರಿ ಶಿಲ್ಪಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಆನೆ ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲ ಹಾಗೂ ಸಿಬ್ಬಂದಿಗಳ ವರ್ಗದವರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣರಾಗಿ ಆಡಳಿತಾತ್ಮಕ ಸಮಸ್ಯೆಯುಂಟಾಗಲು ಕಾರಣರಾಗಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಕಾರಣಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಶಿಲ್ಪಾ ಅವರ ಅಮಾನತು ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read