alex Certify ಸಾಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ಮಹತ್ವದ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ಮಹತ್ವದ ಹೇಳಿಕೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

ಮುಂಬೈನ ಸಾಕಿ ಪ್ರದೇಶದಲ್ಲಿ ನಡೆದ ಅತ್ಯಾಚಾರದಲ್ಲಿ 34 ವರ್ಷದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಈ ಘಟನೆಯು ಸಂಪೂರ್ಣ ಮುಂಬೈಯನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಸಂಬಂಧ ಮಾತನಾಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ, ಈ ಪ್ರಕರಣವು ಮಾನವೀಯತೆಯ ಕಗ್ಗೊಲೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೇ ಪ್ರಕರಣ ಸಂಬಂಧ ಶೀಘ್ರದಲ್ಲೇ ತನಿಖೆ ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ .

ಪ್ರಕರಣದ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲಿದ್ದೇವೆ. ಮೃತ ಅತ್ಯಾಚಾರ ಸಂತ್ರಸ್ತೆಗೆ ಖಂಡಿತವಾಗಿಯೂ ನ್ಯಾಯ ಒದಗಿಸುತ್ತೇವೆ. ಪ್ರಕರಣದ ಕುರಿತು ಗೃಹ ಸಚಿವ ದಿಲೀಪ್​ ವಾಲ್ಸೆ ಪಾಟೀಲ್​ ಹಾಗೂ ಮುಂಬೈ ಪೊಲೀಸ್​ ಆಯುಕ್ತ ಹೇಮಂತ್​ ನಾಗ್ರಾಲೆ ಜೊತೆ ಚರ್ಚೆ ನಡೆಸಿದ್ದೇನೆ. ಪ್ರಕರಣದ ತನಿಖೆಗೆ ಚುರುಕು ಮುಟ್ಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಠಾಕ್ರೆ ಹೇಳಿದ್ರು.

ಸಾಕಿ ಪ್ರದೇಶದಲ್ಲಿ ಟೆಂಪೋದಲ್ಲಿ 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ದುಷ್ಕರ್ಮಿ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ಸಲಾಕೆಯನ್ನು ಹಾಕಿ ಆರೋಪಿಯು ದುಷ್ಕೃತ್ಯದ ಪರಮಾವಧಿಯನ್ನು ಮೆರೆದಿದ್ದ.

ದೆಹಲಿಯ ನಿರ್ಭಯಾ ಪ್ರಕರಣವನ್ನೇ ಹೋಲುವಂತಿದ್ದ ಈ ಪ್ರಕರಣದಲ್ಲೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಂತ್ರಸ್ತೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...