alex Certify ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಅನಧಿಕೃತ ಭೂಮಿ ಸಾಗುವಳಿ ಸಕ್ರಮ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದ್ದು, ರೈತರಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅನಧಿಕೃತ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಡುವ ಪ್ರಕ್ರಿಯೆಗೆ ಸರ್ಕಾರ ಕ್ರಮಕೈಗೊಂಡಿದೆ.

ಅನಧಿಕೃತ ಸಾಗುವಳಿ ಸಕ್ರಮಕ್ಕಾಗಿ ರೈತರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಗಣಕೀಕೃತಗೊಳಿಸಲಾಗುವುದು. ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 2018 -19 ನೇ ಸಾಲಿನಲ್ಲಿ ಅರ್ಜಿ ಸ್ವೀಕಾರಕ್ಕೆ ಕಾಲಾವಕಾಶ ನೀಡಲಾಗಿತ್ತು. ಸಾರ್ವತ್ರಿಕ ಚುನಾವಣೆ ಕಾರಣದಿಂದ ತಂತ್ರಾಂಶದಲ್ಲಿ ಅಳವಡಿಕೆ ಸಾಧ್ಯವಾಗಿರಲಿಲ್ಲ. ಬಾಕಿ ಎಲ್ಲಾ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಸಚಿವ ಆರ್. ಅಶೋಕ್ ಆದೇಶಿಸಿದ್ದಾರೆ. ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಅನಧಿಕೃತವಾಗಿ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...