alex Certify ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ತೆರಳಿ ಮನವಿ ಸಲ್ಲಿಸಲಾಗಿದೆ. ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡಬೇಕು. ವೇತನ ಪರಿಷ್ಕರಣಿಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಶೀಘ್ರವೇ ಯಥಾವತ್ತಾಗಿ ಜಾರಿ ಮಾಡಬೇಕು. ಇಲ್ಲದಿದ್ದಲ್ಲಿ ಜುಲೈ 29 ರಿಂದ ನಿರ್ದಿಷ್ಟ ಅವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮನವಿ ಸಲ್ಲಿಸಿದ ನಂತರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ರಾಜ್ಯ ಸರ್ಕಾರಿ ನೌಕರರ ಸಂಘ, ಸಚಿವಾಲಯ ನೌಕರರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...