ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ರಚನೆ ಸಂಬಂಧ ಬಜೆಟ್ನಲ್ಲಿ ಘೋಷಣೆ ಹೊರಬೀಳಲಿದೆ. ಇದಕ್ಕಾಗಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರಿ ನೌಕರರ ಮಾದರಿ ವೇತನ ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರು ಸಲ್ಲಿಸಿದ್ದು, ವೇತನ ತಾರತಮ್ಯ ನಿವಾರಿಸಲು ಸರ್ಕಾರ 7ನೇ ವೇತನ ಆಯೋಗ ರಚಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಂತೆ 7ನೇ ವೇತನ ಆಯೋಗವನ್ನು ಸರ್ಕಾರ ರಚನೆ ಮಾಡಲಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದ ಆಯೋಗವನ್ನು ರಚಿಸಲಾಗುವುದು, ಅಥವಾ ಅಧಿಕಾರಿಗಳ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.