ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ.
ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಅನುದಾನವನ್ನು 2021 -22 ನೇ ಸಾಲಿನ ವಿವಿಧ ವಿಷಯಗಳಿಗೆ ಸರ್ಕಾರದ ಆದೇಶದನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸಬೇಕೆಂದು ಹೇಳಲಾಗಿದೆ.
ಅನುಮೋದನೆ ಇಲ್ಲದ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿ ಮಾಡಿದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.