ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದ್ದು, ಮುಖ್ಯಮಂತ್ರಿಗಳಿಗೆ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ. ಇದರೊಂದಿಗೆ ಸರ್ಕಾರಿ ನೌಕರರು ಬಹು ದಿನಗಳಿಂದ ನಿರೀಕ್ಷಿಸುತ್ತಿರುವ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.
ಶಿಫಾರಸಿನಂತೆ ಶೇಕಡ 25ರಷ್ಟು ವೇತನ ಹೆಚ್ಚಳ ಮಾಡಲು ಕೆಲವು ಸಚಿವರು ಸಲಹೆ ನೀಡಿದ್ದು, ಅಂತಿಮವಾಗಿ ಆಯೋಗದ ಶಿಫಾರಸು ಜಾರಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ಸಂಪುಟ ಸಭೆ ನೀಡಿದೆ. ಮುಖ್ಯಮಂತ್ರಿಗಳು ಶೇಕಡ 27ರಷ್ಟು ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.