ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅಸಾಧ್ಯವೆನ್ನಲಾಗಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಕುರಿತಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸರ್ಕಾರಿ ನೌಕರರಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಮಾಡುವ ನಿರೀಕ್ಷೆ ಇತ್ತು. ಆದರೆ, ವೇತನ ಪರಿಷ್ಕಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಜುಲೈ 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ರಾಜ್ಯ ಸರ್ಕಾರಿ ನೌಕರರು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಏಳನೇ ವೇತನ ಆಯೋಗ ವರದಿ ನೀಡಿ ನಾಲ್ಕು ತಿಂಗಳಾದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಜ್ಯದ ಎಲ್ಲಾ ವೃಂದದ, ಎಲ್ಲಾ ಇಲಾಖೆಗಳ ನೌಕರರು ಬೇಸರ ವ್ಯಕ್ತಪಡಿಸಿದ್ದು, ಮುಷ್ಕರ ಕೈಗೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 7ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಕೈಗೊಂಡು, ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.