ಬೆಂಗಳೂರು: ಸರ್ಕಾರಿ ನೌಕರರಿಗೆ ನಿರಾಸೆಗೆ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ಅವಧಿ ವಿಸ್ತರಿಸುವ ಸಾಧ್ಯತೆ ಇದ್ದು, ಸದ್ಯಕ್ಕೆ ವೇತನ ಪರಿಷ್ಕರಣೆ ಇಲ್ಲವೆನ್ನಲಾಗಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅಧ್ಯಕ್ಷತೆಯ 7ನೇ ರಾಜ್ಯವೇತನ ಆಯೋಗದ ಅವಧಿಯನ್ನು ಮತ್ತೆ 6 ತಿಂಗಳ ಕಾಲ ವಿಸ್ತರಿಸಲಾಗುವುದು. ಹೀಗಾಗಿ ಸದ್ಯಕ್ಕೆ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆ ಅನುಮಾನವೆನ್ನಲಾಗಿದೆ.
ವೇತನ ಆಯೋಗದ ಅವಧಿ ನವೆಂಬರ್ 16ಕ್ಕೆ ಮುಕ್ತಾಯವಾಗಲಿದೆ. ಅವಧಿಯನ್ನು 6 ತಿಂಗಳು ವಿಸ್ತರಿಸಲು ಚಿಂತನೆ ನಡೆದಿದೆ. ಈಗಲೇ ವರದಿ ಸಲ್ಲಿಕೆಯಾದರೆ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಒತ್ತಡ ಬೀಳಲಿದೆ. ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸುತ್ತಿರುವ ಸರ್ಕಾರ ಇನ್ನಷ್ಟು ಹೆಚ್ಚುವರಿ ಹೊರೆ ಮುಂದೂಡಲು ವೇತನ ಆಯೋಗದ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಮಧ್ಯಂತರ ಪರಿಹಾರ ನೀಡಲಾಗಿದ್ದು, ಅಂತಿಮ ಪರಿಷ್ಕರಣೆ ಮಾಡಿದಲ್ಲಿ ಹೆಚ್ಚಿನ ಹೊರೆಯಾಗುವುದಿಲ್ಲ ಹೀಗಾಗಿ ನೌಕರರು ವೇತನ ಆಯೋಗದ ವರದಿ ಎದುರು ನೋಡುತ್ತಿದ್ದಾರೆ.