ಬೆಂಗಳೂರು : ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ರನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ, ಫೆ. 14 ಸಂಜೆ 5.00 ಗಂಟೆಯಿಂದ ಫೆ.17 ಬೆಳಗ್ಗೆ 6.00 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನನಿರೋಧ ದಿನ ಜಾರಿಗೊಳಿಸಲಾಗುತ್ತಿದೆ. ಆದ್ದರಿಂದ ಫೆ.14 ರಿಂದ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.