
ಬೆಂಗಳೂರು: ವೃಕ್ಷ ಮಾತೆ ಪದ್ಮಶ್ರೀ ಪರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ರಾಜ್ಯ ಸರ್ಕಾರ ನೇಮಿಸಿದೆ. ಅವರಿಗೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಲಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಹೇಳಿದ್ದರು. ಅಂತೆಯೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಶಿಷ್ಟಾಚಾರ ವಿಭಾಗ ಅಧಿಸೂಚನೆ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ. ವೇತನ, ಭತ್ಯೆ, ವಸತಿಗೃಹ, ಸಿಬ್ಬಂದಿ, ಕಾರ್ ಸೇರಿದಂತೆ ಸಂಪುಟ ದರ್ಜೆ ಸಚಿವರಿಗೆ ದೊರೆಯುವ ಹಲವು ಸೌಲಭ್ಯಗಳು ದೊರೆಯಲಿವೆ ಎಂದು ಹೇಳಲಾಗಿದೆ.