
ಉತ್ತರ ಪ್ರದೇಶದ ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿ ಅವದೇಶ್ ಪ್ರಸಾದ್, ಬಿಜೆಪಿ ಅಭ್ಯರ್ಥಿ ಲಾಲು ಸಿಂಗ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡ ಭವ್ಯ ರಾಮಮಂದಿರ ಕಳೆದ ಜನವರಿ ತಿಂಗಳಿನಲ್ಲಿ ಭಕ್ತರಿಗೆ ತೆರೆದುಕೊಂಡಿದ್ದು, ಚುನಾವಣೆಯಲ್ಲಿ ರಾಮಮಂದಿರದ ನಿರ್ಮಾಣದ ಈ ವಿಷಯ ಪ್ರಭಾವ ಬೀರಬಹುದು ಎಂದು ಭಾವಿಸಲಾಗಿತ್ತು.
ಆದರೆ ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲೇ ಬಿಜೆಪಿ ಪರಾಭವಗೊಂಡಿರುವುದು ಪಕ್ಷದ ನಾಯಕರನ್ನು ದಿಗ್ಭ್ರಮೆಗೊಳಿಸಿದೆ. ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ ಭರ್ಜರಿ ಯಶಸ್ಸು ಸಾಧಿಸಿ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದೆ.