
ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ ಕಟ್ಟಿಯ ಮೇಲೆ ಸ್ಟವ್ ಮೇಲೆ ಕುದಿಯುತ್ತಿದ್ದ ಸಾರಿನ ಪಾತ್ರೆಯನ್ನು ಮಗು ಎಳೆದಿದ್ದರಿಂದ ಸುಡುವ ಸಾರು ಮೈಮೇಲೆ ಬಿದ್ದಿದೆ. ಇದರ ಪರಿಣಾಮ ಸುಟ್ಟ ಗಾಯಗಳಾಗಿದ್ದ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.