ಸಂಭಾಲ್ ಮಸೀದಿ ಸರ್ವೇ ವೇಳೆ ಹಿಂಸಾಚಾರ: 24 ಮಂದಿ ಅರೆಸ್ಟ್, ಇಂಟರ್ನೆಟ್ ಸ್ಥಗಿತ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಮಸೀದಿ ಸಮೀಕ್ಷೆ ವೇಳೆ ಹಿಂಸಾತ್ಮಕ ಘರ್ಷಣೆಗಳು ಮತ್ತು ಕಲ್ಲು ತೂರಾಟದ ನಂತರ ಪೊಲೀಸರು ಸುಮಾರು 24 ಜನರನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಪೊಲೀಸ್ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು ಎರಡು ಡಜನ್ ಜನರಿಗೆ ಗಾಯಗಳಾಗಿವೆ. ಮೃತರನ್ನು ಗುರುತಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಹಿಂಸಾಚಾರದಲ್ಲಿ ಭಾಗಿಯಾದವರು ರಾಷ್ಟ್ರೀಯ ಭದ್ರತಾ ಕಾಯಿದೆ(NSA) ಅಡಿಯಲ್ಲಿ ಕಠಿಣ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು ಜಾರಿ ಅಧಿಕಾರಿ ಘೋಷಿಸಿದ್ದಾರೆ.

ನಾವು 20 ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ನ್ಯಾಯಾಲಯದ ಆದೇಶದಂತೆ ಸಮೀಕ್ಷೆ ನಡೆಸಲಾಯಿತು, ಸ್ಥಳದಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಕೆಲವು ವ್ಯಕ್ತಿಗಳು ಮಕ್ಕಳನ್ನು ಎದುರು ನಿಲ್ಲಿಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಶಾಂತಿ ಕಾಪಾಡಲು ಸಮಾಜವಿರೋಧಿಗಳಿಗೆ ಮನವಿ ಮಾಡಿದರು, ಅವರು ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸೇರಿದಂತೆ ಗಲಭೆ ವಿರೋಧಿ ಕ್ರಮಗಳನ್ನು ಬಳಸಿದರು ಎಂದು ಮುನಿರಾಜ್ ಜಿ. ತಿಳಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಸಂಭಾಲ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕೃಷ್ಣ ಕುಮಾರ್ ಬಿಷ್ಣೋಯ್ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read