ಚೆನ್ನೈ: ಸನಾತನ ಧರ್ಮ ಹೇಳಿಕೆ ನೀಡಿದ್ದ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೀರಾ ರೋಡ್ ಪೊಲೀಸರು ಉದಯನಿಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ತಮಿಳುನಾಡಿನ ಬಿಜೆಪಿ ನಿಯೋಗ ರಾಜ್ಯ ಪೊಲೀಸರಿಗೆ ಮನವಿ ಸಲ್ಲಿಸಿದೆ. ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಉದಯನಿಧಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು ಕೊರೊನಾ ಸನಾತನ ಧರ್ಮಕ್ಕೆ ಸಮಾನ ಎಂದು ಅವರು ಹೇಳಿದರು. ಅವರು ಸನಾತನ ಧರ್ಮವನ್ನು ವಿರೋಧಿಸಿದ್ದಲ್ಲದೆ, ಅದನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಉದಯನಿಧಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸನಾತನ ಧರ್ಮದ ಬಗ್ಗೆ ಉದಯನಿಧಿ ಏನು ಹೇಳಿದ್ದಾರೆಂದು ತಿಳಿಯದೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವುದು ಅನ್ಯಾಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.