ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರು ಸೋಮವಾರ ಖಡ್ಗ ಬಳಸಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಭಾವಚಿತ್ರದ ಸಾಂಕೇತಿಕ ‘ಶಿರಚ್ಛೇದ’ ನಡೆಸಿ ನಂತರ ಪೋಸ್ಟರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಸಚಿ ಉದಯನಿಧಿ ಸ್ಟಾಲಿನ್ ಅವರ ತಲೆಗೆ 10 ಕೋಟಿ ರೂಪಾಯಿಗಳ ಬಹುಮಾನವನ್ನು ಪರಮಹಂಸ ಆಚಾರ್ಯ ಘೋಷಿಸಿದರು.
ಪರಮಹಂಸರು ಈ ಹಿಂದೆ ವಿವಾದಗಳನ್ನು ಹುಟ್ಟುಹಾಕುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ, ರಾಮಚರಿತಮಾನಸ್ ವಿರುದ್ಧದ ಹೇಳಿಕೆಗಾಗಿ ಬಿಹಾರದ ಸಚಿವರ ನಾಲಿಗೆಯನ್ನು ಕತ್ತರಿಸಿದ್ದಕ್ಕಾಗಿ ಅವರು 10 ಕೋಟಿ ರೂಪಾಯಿ ಬಹುಮಾನವನ್ನು ಘೋಷಿಸಿದ್ದರು.
ಈ ಹಿಂದೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ವಿರುದ್ಧವೂ ಬೆದರಿಕೆ ಹಾಕಿದ್ದರು.
ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಿದಂತೆ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಶನಿವಾರ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಕೋಲಾಹಲ ಎಬ್ಬಿಸಿದೆ.