ಸನಾತನ ಧರ್ಮ ವಿವಾದ : ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು..?

ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಸೂಕ್ತ ಪ್ರತಿಕ್ರಿಯೆಯ ಅಗತ್ಯವಿದೆ ಎಂದು ಹೇಳಿದ್ದಾರೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಭೆಯಲ್ಲಿ ಹಾಜರಿದ್ದ ಸಚಿವರಿಗೆ ತಿಳಿಸಿದರು. ಪ್ರತಿಪಕ್ಷಗಳ ಚಡಪಡಿಕೆ ಗೋಚರಿಸುತ್ತಿದೆ . ಪ್ರತಿಪಕ್ಷಗಳು ನಮ್ಮ ಸಂವಿಧಾನವನ್ನು ಓದಬೇಕು ಎಂದರು.

ಕಳೆದ ಭಾನುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರು ಸನಾತನ ಧರ್ಮವನ್ನು ಕೊರೋನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದಾರೆ. ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಉದಯ ನಿಧಿ ವಿರುದ್ಧ ಕ್ರಮ ಕೈಗೊಳ್ಳಲು ತಮಿಳುನಾಡು ರಾಜ್ಯಪಾಲರ ಅನುಮತಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂಬ ವರದಿಗಳಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read