ಚೆನ್ನೈ: ಸನಾತನ ದರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಾಗಿದೆ.
ಚೆನ್ನೈನಲ್ಲಿ ನಡೆದ ಪ್ರಗತಿಪರ ಲೇಖಕರು ಹಾಗೂ ಕಲಾವಿದರ ಕಾರ್ಯಕ್ರಮದಲ್ಲಿ ಸನಾತನ ಧರ್ಮ ಎಂಬುದು ಡೆಂಘಿ, ಮಲೇರಿಯಾ ಇದ್ದಂತೆ ಅದನ್ನು ವಿರೋಧಿಸುವುದು ಮಾತ್ರವಲ್ಲ, ಡೆಂಘಿ, ಮಲೇರಿಯಾ ರೀತಿ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಸಚಿವರ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಬಿಜೆಪಿ ನಾಯಕರು ಉದಯನಿಧಿ ಸ್ಟಾಲಿನ್ ವಿರುದ್ಧ ಕಿಡಿಕಾರಿದ್ದಾರೆ.
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಬೆನ್ನಲ್ಲೇ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಾಗಿದ್ದು, ಪದೇ ಪದೇ ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.