ಮಂಗಳೂರು: 15 ದಿನದಲ್ಲಿ ಕರಾವಳಿಗೆ ಹೊಸ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಮುಂದಿನ 15 ದಿನಗಳ ಒಳಗೆ ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಹೊಸ ಮರಳು ನೀತಿ ಜಾರಿಗೆ ತರಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ.ಆರ್.ಜಡ್. ಮತ್ತು ನಾನ್ ಸಿ.ಆರ್.ಜಡ್. ಪ್ರದೇಶ ಇರುವ ಕಾರಣ ಮರಳು ಗಣಿಗಾರಿಕೆಗೆ ಪ್ರತ್ಯೇಕ ಹೊಸ ನೀತಿಯನ್ನು ಜಾರಿಗೊಳಿಸುವುದು ಅನಿವಾರ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.