
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮರಳು ನೀಡಲಾಗುವುದು ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಭಾಗದ ಜನ ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲು ಹೊಸ ಮರಳು ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಹೊಸ ನೀತಿಯಿಂದ ಗ್ರಾಮೀಣ ಭಾಗದಲ್ಲಿ ಆಶ್ರಯ ಯೋಜನೆ, ಇತರೆ ಸಣ್ಣ ಪುಟ್ಟ ವಸತಿ ಯೋಜನೆಗಳಿಗಾಗಿ ಅನುಕೂಲವಾಗುತ್ತದೆ. ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ಎಲ್ಲರಿಗೂ ಮರಳು ಸಿಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉಚಿತವಾಗಿ ತೆಗೆಯುವ ಮರಳನ್ನು ಸ್ವಂತ ಮನೆ ನಿರ್ಮಾಣಕ್ಕೆ ಬಳಸಬೇಕು. ಮಾರಾಟ ಮಾಡಲು ಅವಕಾಶ ಇರುವುದಿಲ್ಲ. ಬೇರೆ ಜಿಲ್ಲೆಗಳಿಗೆ ಸಾಗಿಸುವಂತಿಲ್ಲ. ಹಳ್ಳ ತೊರೆಗಳಿಂದ ಮರಳು ತೆಗೆಯಬಹುದಾಗಿತ್ತು ಮರಳು ಸಂಗ್ರಹ ಮತ್ತು ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.