
ಅಹಮದಾಬಾದ್: ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ಬದಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ಲಾರಿ ಪಲ್ಟಿಯಾಗಿ ಬಿದ್ದಿದೆ. ಮೂವರು ಮಹಳಿಯೆರು ಓರ್ವ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಕಿರಿದಾದ ರಸ್ತೆಯಲ್ಲಿಯೇ ಮರಳು ಲಾರಿ ಚಾಲಕ ಲಾರಿ ಚಲಾಯಿಸಲು ಯತ್ನಿಸಿದ್ದಾನೆ. ನಿಯಂತ್ರಣ ಕಳೆದುಕೊಂಡ ಲಾರಿ ಪಲ್ಟಿಯಾಗಿ ಬಿದ್ದಿದೆ.
ಮರಳು ಲಾರಿ ಅಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದಾರೆ. ಜೆಸಿಬಿ ಮೂಲಕವಾಗಿ ನಾಲ್ವರ ಶವವನ್ನು ಹೊರತೆಗೆಯಲಾಗಿದೆ. ಮೃತರು ದಾಹೋದ್ ಜಿಲ್ಲೆಯವರಾಗಿದ್ದು, ಕೆಲಸಕ್ಕೆಂದು ಬಂದಿದ್ದ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ.