ಬೆಂಗಳೂರು: ಮನೆ, ಕಟ್ಟಡ ನಿರ್ಮಿಸುವವರಿಗೆ ಮರಳು ಹೊಂದಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಹೊಸ ಮರಳು ನೀತಿ ಇನ್ನು 15 ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ.
ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಚಾಮರಾಜನಗರದಲ್ಲಿ ಮಾತನಾಡಿ, ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೊಸ ಮರಳು ನೀತಿ ಹಾಗೂ ಹೊಸ ಖನಿಜ ನೀತಿಯ ಕರಡು ಸಿದ್ದಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು 15 ದಿನಗಳಲ್ಲಿ ಹೊಸ ಮರಳು ನೀತಿ ಅನುಷ್ಠಾನಗೊಳ್ಳಲಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರಿಗೆ 5 ಪಟ್ಟು ಹಾಕುವುದು ಸರಿಯಲ್ಲ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿಚಕ್ರ, ತ್ರಿಚಕ್ರ ವಾಹನ, ಎತ್ತಿನಗಾಡಿಯಲ್ಲಿ ಮರಳು ಸಾಗಣೆ ಮಾಡುವವರ ವಿರುದ್ಧ ಕೇಸ್ ದಾಖಲಿಸಬಾರದು ಎಂದು ಸೂಚಿಸಲಾಗಿದೆ. ಎಲ್ಲಾ ಡಿಸಿಗಳಿಗೆ ಕರಡು ಕಳುಹಿಸಲಾಗಿದೆ. ಎತ್ತಿನಗಾಡಿ, ದ್ವಿಚಕ್ರ, ತ್ರಿಚಕ್ರ ವಾಹನಗಳಲ್ಲಿ ಮರಳು ಸಾಗಾಟಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.