ಬೆಂಗಳೂರು: ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡಲು ಹೊಸ ಮರಳು ನೀತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗ್ರಾಮ ಪಂಚಾಯಿತಿಗಳಿಂದ ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ಪೂರೈಕೆ ಮಾಡಲಾಗುವುದು. ಪ್ರತಿ ಟನ್ ಗೆ 300 ರಿಂದ 700 ರೂಪಾಯಿವರೆಗೆ ದರ ನಿಗದಿ ಮಾಡಲಾಗುವುದು.
ಮರಳು ಪೂರೈಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಕಡಿಮೆ ದರದಲ್ಲಿ ಮರಳು ಪೂರೈಸಲು ಹೊಸ ಮರಳು ನೀತಿಯನ್ನು ಜಾರಿಗೊಳಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಟನ್ ಮರಳಿಗೆ 300 ಮತ್ತು ನದಿಪಾತ್ರದ ವ್ಯಾಪ್ತಿಯ ಮರಳಿಗೆ 700 ರೂ. ನಿಗದಿ ಮಾಡಲಾಗಿದೆ. ಸರ್ಕಾರಿ ಯೋಜನೆಗಳು, ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ನೀಡಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರ ನೀಡಲಾಗಿದೆ.