ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು ಬಂಧಿಸಲಾಗಿದೆ. ಬಂಧಿತರು ರೈತರ ಜಮೀನಿನಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದರು. ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ ಭಾಗದಲ್ಲಿ ಶ್ರೀಗಂಧದ ಮರಗಳನ್ನು ಕಳವು ಮಾಡಿದ್ದರು. ಬಂಧಿತರಿಂದ 3 ಲಕ್ಷ ರೂಪಾಯಿ ಮೌಲ್ಯದ 40 ಕೆಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.