alex Certify BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

ಪ್ರೇಮ ಮೃತ ಮಹಿಳೆ. ತಡರಾತ್ರಿ ಕನಕಪುರ ರಸ್ತೆಯಲ್ಲಿ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಈ ಅಪಘಾತ ಸಂಭವಿಸಿದೆ. ರಾತ್ರಿ ಊಟ ಮುಗಿಸಿ ದಂಪತಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...