ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳದಂತಹ ಆರೋಪಗಳು ಕೇಳಿಬಂದಿದ್ದು, ಕೇರಳದ ಹೇಮಾ ಮಾದರಿ ಸಮಿತಿಯನ್ನು ಸ್ಯಾಂಡಲ್ ವುಡ್ ಗೂ ರಚಿಸುವಂತೆ ಫೈರ್ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ನಡೆದರೆ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಫೈರ್ ಸಂಸ್ಥೆ ಮನವಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.