ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಇಬ್ಬರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ ಗಳ ಬಂಧನವಾಗಿತ್ತು. ಸಂಜನಾ ಮತ್ತು ಶಿವಪ್ರಕಾಶ್ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿದೆ.