BIG NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್

ಬೆಂಗಳೂರು: ಖ್ಯಾತ ನಿರ್ಮಾಪಕ, ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿವಾಸದಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮಗಳು ಸೌಂದರ್ಯ ಅವರ ವಿವಾಹ ಮಾಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬ ಸದಸ್ಯರು ಕಣ್ಣೀರಿನಲ್ಲಿ ಮುಳುಗಿದ್ದಾರೆ.

ಸೌಂದರ್ಯ ಜಗದೀಶ್ ಬಹಳ ಸಾಲ ಮಾಡಿದ್ದರು ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಬ್ಯಾಂಕ್ ನವರು ಮನೆ ಸೀಜ್ ಮಾಡಿದ್ದರು. ಇದರಿಂದ ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದರು. ಇನ್ನು ಕೆಲ ದಿನಗಳ ಹಿಂದೆ ಜೆಟ್ ಲಾಗ್ ಮೇಲೆ ಪೊಲೀಸರು ದಾಳಿ ಕೂಡ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ತೀವ್ರವಾಗಿ ಮನನೊಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಅಪ್ಪು-ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಸೇರಿದಂತೆ ಹಲವು ಸಿನಿಮಾ ನಿರ್ಮಿಸಿದ್ದರು. ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕನ್ನಡ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದ್ದು, ತನಿಖೆಯಿಂದಷ್ಟೇ ನಿರ್ಮಾಪಕನ ಆತ್ಮಹತ್ಯೆಯ ಕುರಿತು ಸತ್ಯಾಸತ್ಯತೆ ಹೊರಬರಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read