ನಾಳೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ ನ ಹಲವಾರು ಸೆಲಬ್ರೆಟಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಮರಿ ಟೈಗರ್ ವಿನೋದ್ ಪ್ರಭಾಕರ್ ಸೇರಿದಂತೆ ನೆನಪಿರಲಿ ಪ್ರೇಮ್, ಧನ್ವೀರ್ ಗೌಡ, ಅದಿತಿ ಪ್ರಭುದೇವ, ಮೇಘನ ಗಾವಂಕರ್, ನಿರ್ದೇಶಕ ಪ್ರೇಮ್, ಸೋನಾಲ್ ಮಂಟೆರೋ, ಅಭಿಷೇಕ್ ಅಂಬರೀಶ್, ಕೆಜಿಎಫ್ ಖ್ಯಾತಿಯ ಗರುಡ ರಾಮ್ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಚಿಕ್ಕಣ್ಣ ಮತ್ತು ‘ಹಿಟ್ಲರ್ ಕಲ್ಯಾಣ’ ಧಾರವಾಹಿಯ ಮಲೈಕಾ ವಾಸುಪಾಲ್ ಪ್ರಮುಖ ಪಾತ್ರದಲ್ಲಿದ್ದು, ಡಿ ಎನ್ ಸಿನಿಮಾ ಬ್ಯಾನರ್ ನಡಿ ಸ್ಮಿತಾ ಉಮಾಪತಿ ಮತ್ತು ನಿರ್ಮಲಾ ಶ್ರೀನಿವಾಸ್ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.