ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ವಿವಿಧ ಸಂಘಟನೆಗಳು, ಉದ್ಯಮಗಳು ಬೆಂಬಲ ನೀಡಿದೆ.
ಬೆಂಗಳೂರು ಬಂದ್ ಗೆ ‘ಸ್ಯಾಂಡಲ್ ವುಡ್’ ಕೂಡ ಬೆಂಬಲ ನೀಡಿದ್ದು, ಇಂದು ಸಿನಿಮಾ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ.
ಯೆಸ್, ಬೆಂಗಳೂರು ಬಂದ್ ಗೆ ಕನ್ನಡ ಚಿತ್ರೋದ್ಯಮ ಸಂಪೂರ್ಣ ಬೆಂಬಲ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್ ಮಾಡಲಾಗಿದೆ . ಎಲ್ಲಾ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿದ್ದ ಎಲ್ಲಾ ಚಿತ್ರೀಕರಣವನ್ನು ನಿಲ್ಲಿಸಲಾಗಿದೆ. ಟೆಲಿವಿಷನ್ ಅಸೋಸಿಯೇಷನ್ ಕೂಡ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೀರಿಯಲ್ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಗಳು ಸ್ಥಗಿತಗೊಳಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ನಗರದ ಹಲವಡೆ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.