alex Certify ಕಾಂಗ್ರೆಸ್ ಸೇರಲು ಸಜ್ಜಾದ ಸಂದೇಶ್ ನಾಗರಾಜ್ ಸ್ಪೋಟಕ ಮಾಹಿತಿ: 10 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸೇರಲು ಸಜ್ಜಾದ ಸಂದೇಶ್ ನಾಗರಾಜ್ ಸ್ಪೋಟಕ ಮಾಹಿತಿ: 10 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ

ಮೈಸೂರು: ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ ಸಂದೇಶ ನಾಗರಾಜ್, ಬಿಜೆಪಿಯಿಂದ 10 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದ್ದಾರೆ.

ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ಒನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

ನಾನು ಜೆಡಿಎಸ್ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿಗೆ ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...