alex Certify BIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಶ್ರೀ

ಚಿತ್ರದುರ್ಗ: ಮನೆಗಳಲ್ಲಿ, ವೇದಿಕೆ ಕಾರ್ಯಕ್ರಮಗಳಲ್ಲಿ ವಿಘ್ನನಿವಾರಕನನ್ನಾಗಿ ಗಣಪತಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ, ಅದರ ಬದಲಿಗೆ ವಾಸ್ತವಕ್ಕೆ ತಕ್ಕನಾದ ವಚನಗಳನ್ನು ಪಠಿಸಬೇಕು ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ಗುರುವಾರದಿಂದ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...